Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಕಾಶ್ಮೀರ: ಚೆನಾಬ್ ನದಿಗೆ ಉರುಳಿದ ವಾಹನ, 13 ಮಂದಿ ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಯಾತ್ರಿಗಳನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಸ್ಕಿಡ್ ಆಗಿ ಚೆನಾಬ್ ನದಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮಠ ಮಚೈಲ್ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ವಾಹನ ಚೆನಾಬ್ ನದಿಗೆ ಉರುಳಿ ಬಿದ್ದಿದೆ.
ಕಿಸ್ತ್ವಾರ ಜಿಲ್ಲಾ ಕೇಂದ್ರದಿಂದ 28 ಕೀ.ಮಿ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಗುಪ್ತಾ ಅವರು ತಿಳಿಸಿದ್ದಾರೆ.
ಅಪಘಾತದಲ್ಲಿ ವಾಹನದ ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 11 ಮೃತದೇಹಗಳನ್ನೂ ಕೂಡ ನದಿಯಿಂದ ಹೊರತೆಗೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಸೋಮವಾರವೂ ಇಲ್ಲಿ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
No Comments

Leave A Comment