Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ತುಮಕೂರು : ಬಸ್‌ಗಳೆರಡರ ಢಿಕ್ಕಿ; ಸ್ಥಳದಲ್ಲೇ ಮೂವರ ಸಾವು

ಶಿರಾ: ರಾಷ್ಟ್ರೀಯ ಹೆದ್ದಾರಿಯ 4 ರ ಕಳ್ಳಂಬೆಳ್ಳ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ  ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಖಾಸಗಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು  ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 10 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್‌ಪಟ್ಟಿದ್ದಾರೆ.

ಚಿತ್ರದುರ್ಗದ ಕಡೆ ಬರುತ್ತಿದ್ದ ಸರ್ಕಾರಿ ಬಸ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಖಾಸಗಿ ಬಸ್‌ ಗುದ್ದಿದೆ. ಪರಿಣಾಮವಾಗಿ ಸರ್ಕಾರಿ ಬಸ್‌ನಲ್ಲಿದ್ದ ಇಬ್ಬರು ಮತ್ತು ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಗಳು ಕಾರವಾರ ಮೂಲದ ಪರಮೇಶ್ವರ ನಾಯ್ಕ (50)ಬೆಂಗಳೂರು ಮೂಲದ ನಿಖಿತಾ(27) ಮತ್ತು
ಧನರಾಜ್‌(45) ಎಂದು ತಿಳಿದು ಬಂದಿದೆ.

ಕಳ್ಳಂಬೆಳ್ಳ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment