Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

8 ಲಕ್ಷ ರೂ. ವರದಕ್ಷಿಣಿಗೆ ಡಿಮ್ಯಾಂಡ್, ಬಾಂಗ್ಲಾ ಕ್ರಿಕೆಟಿಗನ ವಿರುದ್ಧ ಪತ್ನಿ ದೂರು!

ಢಾಕಾ: ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ ಎಂದು ಬಾಂಗ್ಲಾದೇಶ ಕ್ರಿಕೆಟಿಗ ಮೊಸದ್ದೀಕ್ ಹುಸೇನ್ ವಿರುದ್ಧ ಪತ್ನಿ ಗಂಭೀರ ಆರೋಪ ಮಾಡಿದ್ದಾರೆ.

ಮೊಸದ್ದೀಕ್ ಹುಸೇನ್ ಕಳೆದ ಆರು ವರ್ಷಗಳ ಹಿಂದೆ ಶರ್ಮಿನ್ ಸಮಿರಾ ಉಷಾರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ತನಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಶರ್ಮಿನ್ ಆರೋಪ ಮಾಡಿದ್ದಾರೆ.

ಮೊಸದ್ದೀಕ್ 8 ಲಕ್ಷ ರುಪಾಯಿಗಾಗಿ ಡಿಮ್ಯಾಂಡ್ ಮಾಡಿದ್ದಾರೆ ಎಂದು ಶರ್ಮಿನ್ ಆರೋಪ ಮಾಡಿದ್ದು ಈ ಆರೋಪಕ್ಕೆ ಬಾಂಗ್ಲಾ ಕ್ರಿಕೆಟಿಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ನ್ಯಾಯಾಧೀಶ ರೋಸಿನಾ ಖಾನ್ ಪ್ರಕರಣದ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

No Comments

Leave A Comment