Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಜಮ್ಮು : ಇಬ್ಬರು ಉಗ್ರರ ಹತ್ಯೆ, ಭಾರೀ ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಜಮ್ಮು : ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಇಂದು ಬುಧವಾರ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಹಿಜ್ಬುಲ್‌ ಮುಜಾಹಿದೀನ್‌ ಉಗ್ರರನ್ನು ಹೊಡೆದುರುಳಿಸಿದರು.

ಹತ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡವು.

ಅನಂತನಾಗ್‌ ನ ಮುನಿವರ್ದ ಗ್ರಾಮದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಗುಪ್ತಚರ ಮಾಹಿತಿಯನ್ನು ಅನುಸರಿಸಿ ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ದಳದವರು ಇಂದು ಮುಂಜಾನೆ ಈ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಹಿಜ್ಬುಲ್‌ ಉಗ್ರರ ಹತ್ಯೆಗೈದರೆಂದು ಸೇನೆಯ ಅಧಿಕೃತ ಪ್ರಕಟನೆ ತಿಳಿಸಿದೆ.

ಈ ಪ್ರದೇಶದಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಅಡಗಿಕೊಂಡಿರಬಹುದಾದ ಉಗ್ರರಿಗಾಗಿ ಇನ್ನಷ್ಟು ಶೋಧ ಕಾರ್ಯ ನಡೆಸಲು ಭದ್ರತಾ ಪಡೆಗಳು ಈ ಪ್ರದೇಶವನ್ನು ಎಲ್ಲ ಕಡೆಯಿಂದ ಸುತ್ತುವರಿದಿರುವುದಾಗಿ ತಿಳಿದು ಬಂದಿದೆ.

No Comments

Leave A Comment