Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಶ್ರೀಕೃಷ್ಣ ಜಯಂತಿ ಭಜನಾ ಕಾರ್ಯಕ್ರಮ ಉದ್ಘಾಟನೆ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿಯವರು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಹಮ್ಮಿ ಕೊಂಡಿರುವ ಭಜನಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಅದಮಾರು ಮಠದ ದಿವಾನರಾದ ವೆಂಕಟರಮಣ ಮುಚ್ಚಿಂತಾಯ,ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ,ಗೋಪಾಲ್ ಕುಂದರ್,ಭಾಸ್ಕರ ಕಿದಿಯೂರು,ಶಿವರಾಮ ಅಂಬಲ್ಪಾಡಿ,ಸಿ.ಸಿ.ಕರ್ಕೇರ,ಭೋಜರಾಜ್ ಕಿದಿಯೂರು,ಸುಧಾಕರ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.

No Comments

Leave A Comment