Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಉತ್ತರ ಪ್ರದೇಶದಲ್ಲಿ ಭಾರೀ ಮಳೆಗೆ 44 ಬಲಿ; ಜನತೆಯಲ್ಲಿ ತೀವ್ರ ಆತಂಕ

ಲಕ್ನೋ: ಉತ್ತರಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಬುಧವಾರದ ವರೆಗೆ ಸಂಬಂಧಿ ಘಟನೆಗಳಿಗೆ 44 ಮಂದಿ ಬಲಿಯಾಗಿ, 36 ಕ್ಕೂ ಹೆಚ್ಚು  ಮಂದಿ ಗಾಯಗೊಂಡಿದ್ದಾರೆ.

 ಬುಧವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು  ಹವಾಮಾನ ಇಲಾಖೆ ನೀಡಿದೆ.ಶನಿವಾರದಿಂದೀಚೆಗೆ ಮಳೆ ಅವಘಡಕ್ಕೆ ಮೃತರ ಸಂಖ್ಯೆ 44 ದಾಟಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಗಂಗಾ, ಯಮುನಾ ಸೇರಿ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಮುನ್ನಚ್ಚರಿಕೆ ವಹಿಸಲಾಗಿದೆ.

No Comments

Leave A Comment