Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಈಶಾನ್ಯ ರಾಜ್ಯಗಳು,ಬಂಗಾಳದಲ್ಲಿ ಭೂಕಂಪನ ; 5.6 ತೀವ್ರತೆ ದಾಖಲು

ಕೋಲ್ಕತಾ: ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ  ಬುಧವಾರ ಬೆಳಗ್ಗೆ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು , ಪಶ್ಚಿಮ ಬಂಗಾಳದಲ್ಲೂ ಕಂಪನದ ಅನುಭವವಾಗಿದೆ.

ರಿಕ್ಟರ್‌ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪನ ಕೇಂದ್ರ ಬಿಂದು ಅಸ್ಸಾಂನಲ್ಲಿತ್ತು ಎಂದು ತಿಳಿದು ಬಂದಿದೆ.

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಬೆಳಗಿನ ಜಾವ ಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

ಯಾವುದೇ ಹಾನಿಯ ಕುರಿತು ಇದುವರೆಗೆ ವರದಿಯಾಗಿಲ್ಲ.

No Comments

Leave A Comment