Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ; ಪತ್ನಿಗೆ ಪತಿಯು ಮಾಲೀಕನಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ನವದೆಹಲಿ: ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ.

ಸೆಕ್ಷನ್ 497ರ ಅಸಾಂವಿಧಾನಿಕ  ತೀರ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ,  ಅನೈತಿಕ ಸಂಬಂಧದ ಕುರಿತು ತೀರ್ಪು ಓದಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಕಾನೂನಿನ ಪ್ರಕಾರ,  ಗಂಡನೇ ಎಲ್ಲದಕ್ಕೂ ಮುಖ್ಯಸ್ಥನಲ್ಲ, ಮಹಿಳೆಗೂ ಗೌರವ ತೋರಬೇಕು. ಮಹಿಳೆಯರ ಜೊತೆ ಅಗೌರವದ ವರ್ತನೆ ಸರಿಯಲ್ಲ, ಮಹಿಳೆಯರಿಗೆ ಅಗೌರವ ತೋರುವ ಕಾನೂನು ಸಾಂವಿಧಾನಿಕವಲ್ಲ ಎಂದು ದೀಪಕ್ ಮಿಶ್ರ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠ ಅಭಿಪ್ರಾಯ ಪಟ್ಟಿದೆ.

ಪತ್ನಿಯ ಪ್ರಿಯಕರನ ಬಗ್ಗೆ ಪ್ರಶ್ನಿಸುವ ವಿಚಾರಿಸುವ ಹಕ್ಕು ಪತಿಗೆ ಇದೆ ಎಂದಾದರೇ, ಪತಿಯ ಪ್ರಿಯತಮೆಯ ಬಗ್ಗೆ ವಿಚಾರಣೆ ನಡೆಸುವ ಹಕ್ಕು ಪತ್ನಿಗೇಕಿಲ್ಲ , ಕಾನೂನಿನ ಪ್ರಕಾರ, ಮಹಿಳೆಗೆ ತನ್ನ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸುವ ಹಕ್ಕಿಲ್ಲ ಎಂದು ಇದೆ, ಆದರೆ ಅದು ಸರಿಯಲ್ಲಿ, ಪತ್ನಿಗೂ ಪ್ರಶ್ನಿಸುವ ಅಧಿಕಾರವಿದೆ ಎಂದು ಸುಪ್ರೀಂ ಅಭಿಪ್ರಾಯ ಪಟ್ಟಿದೆ. ಪತಿ ಅವಿವಾಹಿತೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದಾನೆಯೇ ಇಲ್ಲವೇ ಎಂಬುದು ಪರಿಗಣನೆಗೆ ಇಲ್ಲ ಎಂದು ತೀರ್ಪಿನಲ್ಲಿ ಹೇಳಿದೆ.

No Comments

Leave A Comment