Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಪೆಟ್ರೋಲ್ ದರ ಎಷ್ಟು ಗೊತ್ತಾ?

ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 22 ಪೈಸೆಯಷ್ಟು ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಟು ಏರಿಕೆಯಾಗಿದೆ.

ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.40ರೂ ಗೆ ಏರಿಕೆಯಾಗಿದ್ದು, ಡೀಸೆಲ್ 74.63ಕ್ಕೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ 90.75 ರೂಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 79.23 ರೂಗೆ ಏರಿಕೆಯಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.19 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 75.09ರೂಗೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದರಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಇಂಧನ ದರ ಏರಿಕೆಗೆ ಕಾರಣ ಎನ್ನವಾಗಿದೆ.

No Comments

Leave A Comment