Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ತುಳುಕೂಟದಿಂದ ವೈದ್ಯಕೀಯ ಶಿಕ್ಷಣಕ್ಕೆ ತುಳು ಸರ್ಟಿಫಿಕೇಟ್ –ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ತುಳು ಮಾತೃಭಾಷೆ ಮಾತನಾಡುವ ವಿದ್ಯಾರ್ಥಿಗಳಿಗೆ ತುಳು ಕೋಟಾದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಾವಕಾಶ ಪಡೆಯಲು ತುಳುಕೂಟದ ಮೂಲಕ ತುಳು ಸರ್ಟಿಫಿಕೇಟನ್ನು ನೀಡಲಾಗುತ್ತಿದ್ದು, ಪ್ರತೀ ವರ್ಷ ನೂರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿರುವುದು ತುಳುಕೂಟಕ್ಕೆ ಹೆಮ್ಮೆ ತರಿಸಿದೆ ಎಂದು ತುಳುಕೂಟ ಉಡುಪಿ(ರಿ) ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಭಾನುವಾರ ನಡೆದ ತುಳುಕೂಟ ಉಡುಪಿ(ರಿ) ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮಾಹೆ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ತುಳುಪೀಠ ಸ್ಥಾಪನೆಯ ಪ್ರಸ್ತಾವವಿದ್ದು, ಅತೀ ಶೀಘ್ರದಲ್ಲಿ ತುಳುಪೀಠ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದ ಅವರು, ತುಳು ಭಾಷೆ, ಸಂಸ್ಕøತಿ ಕುರಿತು ಜನಜಾಗೃತಿ ಮೂಡಿಸುವ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ತುಳುಕೂಟಕ್ಕೆ ಹೆಚ್ಚು ಹೆಚ್ಚು ಸದಸ್ಯರು ಸೇರಿಕೊಂಡು ಸಂಘÀಟನೆಯನ್ನು ಬಲಪಡಿಸಬೇಕು ಎಂದವರು ವಿನಂತಿಸಿದರು. ಈ ಸಂದರ್ಭ ನೂತನ 2018-19ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಿವಿಧ ಕಾರ್ಯಕ್ರಮಗಳ ಸಂಚಾಲಕರನ್ನು ಅಭಿನಂದಿಸಲಾಯಿತು. ವೇದಿಕೆಯ ತುಳುಕೂಟದ ಉಪಾಧ್ಯಕ್ಷರಾದ ವಿ.ಜಿ.ಶೆಟ್ಟಿ, ತಾರಾ ಆಚಾರ್ಯ ಉಪಸ್ಥಿತರಿದ್ದರು. ಭಾಗ್ಯಲಕ್ಷ್ಮೀ ಉಪ್ಪೂರು ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ವರದಿ ವಾಚಿಸಿದರು. ಕೋಶಾಧಿಕಾರಿ ಎಂ.ಜಿ.ಚೈತನ್ಯ ಲೆಕ್ಕಪತ್ರ ಮಂಡಿಸಿದರು. ಜತೆಕಾರ್ಯದರ್ಶಿ ಮೋಹನ್ ಶೆಟ್ಟಿ ವಂದಿಸಿದರು.

No Comments

Leave A Comment