Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಆರೂರು ಗ್ರಾಮ ಪಂಚಾಯತ್: ಗಾಂಧಿ ಜಯಂತಿ ಆಚರಣೆ

ಉಡುಪಿ : 21 ನೇ ಆರೂರು ಗ್ರಾಮ ಪಂಚಾಯತ್ನಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆಯನ್ನು ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.

ಸ್ವಚ್ಛತಾ ಹೀ ಸೇವಾ: ಗಾಂಧೀ ಜಯಂತಿ ಜನ್ಮ ದಿನಾಚರಣೆ ಸಂದರ್ಭದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಅಂಗನವಾಡಿ ಮತ್ತು ಶಾಲೆಗಳಿಗೆ ಸ್ವಚ್ಛತಾ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

No Comments

Leave A Comment