Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಹಠಾತ್ ನಿಧನ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್​ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮಿಳಾ ಉಮಾಶಂಕರ್(44 ವರ್ಷ) ತೀವ್ರ ಹೃದಯಾಘಾತದಿಂದ ಗುರುವಾರ  ತಡರಾತ್ರಿ ನಿಧನ ಹೊಂದಿದ್ದಾರೆ.

ಕಳೆದ  ರಾತ್ರಿ 12.50ರಲ್ಲಿ ರಮಿಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಪಶ್ಚಿಮ ಕಾರ್ಡ್​ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಕಾವೇರಿಪುರಂ ವಾರ್ಡ್​ನಿಂದ (103) ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಮಿಳಾ ಅವರು ಜಯ ಸಾಧಿಸಿದ್ದರು. ಕಳೆದ ವಾರ ಸೆಪ್ಟೆಂಬರ್ 28ರಂದು ಬಿಬಿಎಂಪಿಯ ಉಪ ಮೇಯರ್​ ಆಗಿ ಅವರು ಆಯ್ಕೆಯಾಗಿದ್ದರು.ನಿನ್ನೆ ಬೆಳಗ್ಗೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು  ನಮ್ಮ ಮೆಟ್ರೋಗೆ ಭೇಟಿ ನೀಡಿದ್ದಾಗ, ಉಪ ಮುಖ್ಯಮಂತ್ರಿ ಪರಮೇಶ್ವರ್​ ಅವರು ನಿನ್ನೆ ಬೆಳಗ್ಗೆಯೇ ಕೆ.ಆರ್.ಮಾರುಕಟ್ಟೆ ಸುತ್ತಮುತ್ತ ಪರಿಶೀಲನೆಯಲ್ಲಿ ತೊಡಗಿದ್ದಾಗ ರಮಿಳಾ ಅವರೂ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಭಾಗವಹಿಸಿದ್ದರು.

ಹೀಗೆ ದಿನವಿಡೀ ಲವಲವಿಕೆಯಿಂದಲೇ ಇದ್ದ ರಮಿಳಾ ಅವರು ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.ರಮಿಳಾ ಅವರ ಹಠಾತ್ ನಿಧನದಿಂದ ಕುಟುಂಬ ತೀವ್ರ ದುಃಖತಪ್ತವಾಗಿದೆ. ಅವರ ಬಂಧುಗಳು, ಸ್ನೇಹಿತರು, ರಾಜಕೀಯ ಮುಖಂಡರಿಗೆ ಸಹ ಈ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ.

 

No Comments

Leave A Comment