Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್ ವೈ

ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಉಪ ಚುನಾವಣೆ ಘೋಷಣೆಯಾದ ನಂತರ ಶಿಕಾರಿಪುರದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ. ಕಳೆದ ಚುನಾವಣೆಯಲ್ಲಿ ನನ್ನನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಿದಂತೆ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.
ಶಿವಮೊಗ್ಗ ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರಿಂದ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ.

ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿವೆಯೇ ಅಥವಾ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿವೆಯೇ ಎನ್ನುವುದು ಈಗ ಕುತೂಹಲ ಮೂಡಿಸಿದೆ.
No Comments

Leave A Comment