Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕುದ್ರೋಳಿ: ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗುವ ಮಂಗಳೂರು ದಸರಾಕ್ಕೆ ಮುನ್ನುಡಿಯಾಗಿ ಪೂರ್ವಾಹ್ನ 11.50ಕ್ಕೆ ದೇವಸ್ಥಾನದ ಗೋಕರ್ಣನಾಥ ಕಲ್ಯಾಣ ಮಂಟಪದ ದರ್ಬಾರು ಮಂಟಪದಲ್ಲಿ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.

ಉತ್ಸವಕ್ಕೆ ಚಾಲನೆ ನೀಡಿದ ಕರ್ಣಾಟಕ ಬ್ಯಾಂಕಿನ ವ್ಯವ ಸ್ಥಾಪಕ ನಿರ್ದೇಶಕ ಎಂ.ಎಸ್‌. ಮಹಾಬಲೇಶ್ವರ ದಂಪತಿ ನವದುರ್ಗೆಯರ ಆರಾಧನೆಯಿಂದ ಎಲ್ಲೆಡೆ ಶಾಂತಿ, ಸಮೃದ್ಧಿ ನೆಲೆಸಲಿ ಎಂದರು.

ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ, ಉಪಾಧ್ಯಕ್ಷ ರಾಘವೇಂದ್ರ ಕೂಳೂರು, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್‌ ಆರ್‌., ಟ್ರಸ್ಟಿಗಳಾದ ಬಿ.ಕೆ. ತಾರಾನಾಥ್‌, ರವಿಶಂಕರ ಮಿಜಾರ್‌, ಕೆ. ಮಹೇಶ್ಚಂದ್ರ, ಕ್ಷೇತ್ರಾಡ ಳಿತ ಮಂಡಳಿಯ ಸಹ ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್‌ ಕುಮಾರ್‌, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ಮಾಲತಿ ಜೆ. ಪೂಜಾರಿ, ಹರಿಕೃಷ್ಣ ಬಂಟ್ವಾಳ್‌, ದೇವೇಂದ್ರ ಪೂಜಾರಿ, ಡಾ| ಬಿ.ಜಿ. ಸುವರ್ಣ ಉಪಸ್ಥಿತರಿದ್ದರು.

ಜಗಮಗಿಸುತ್ತಿದೆ ಮಂಗಳೂರು
ಮಂಗಳೂರು ದಸರಾ ಹಿನ್ನೆಲೆಯಲ್ಲಿ ಮಂಗಳೂರು ನಗರವೇ ವಿದ್ಯುದ್ದೀಪಗಳಿಂದ ಜಗಮಗಿಸುತ್ತಿದೆ. ದಸರಾ ಮೆರವಣಿಗೆ ಸಾಗುವ ಕುದ್ರೋಳಿ, ಮಣ್ಣಗುಡ್ಡೆ, ಲೇಡಿಹಿಲ್‌, ಲಾಲ್ಬಾಗ್‌, ಪಿವಿಎಸ್‌, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ ಮುಂತಾದ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಕಿನ ಸಿಂಗಾರವೇ ಗಮನ ಸೆಳೆಯು ತ್ತಿದೆ. ಕ್ಷೇತ್ರದಲ್ಲಿ ದಿನಂಪ್ರತಿ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ಅ. 14: ಮಂಗಳೂರು ದಸರಾ ಉದ್ಘಾಟನೆ 
ಮಂಗಳೂರು ದಸರಾವನ್ನು ಅ. 14ರ ಸಂಜೆ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅ. 19ರ ಸಂಜೆ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಸಂತರು, ದಾರ್ಶನಿಕರ ಹಾಗೂ ಕರಾವಳಿ ಜಿಲ್ಲೆಯ ಸಂಸ್ಕೃತಿಯನ್ನು ಸಾರುವ ಆಕರ್ಷಕ ಸ್ತಬ್ಧ ಚಿತ್ರಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಲಿವೆ ಹಾಗೂ ರಾಜ್ಯದ ಪ್ರತಿ ಜಿಲ್ಲೆಯಿಂದ ಕಲಾತಂಡಗಳು ಭಾಗವಹಿಸಲಿವೆ ಎಂದು ಪದ್ಮರಾಜ್‌ ಆರ್‌. ತಿಳಿಸಿದ್ದಾರೆ.

No Comments

Leave A Comment