Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಶಬರಿಮಲೆಗಾಗಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ ಹಿಂಸೆಗೆ ತಿರುಗಿತು

ತಿರುವನಂತಪುರಂ: ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸುವ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಗುರುವಾರ ಸಚಿವರ ನಿವಾಸದ ಎದುರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ದೇವಸ್ವಂ ಮಂಡಳಿ ಖಾತೆಯ ಸಚಿವ ಕೆ ಸುರೇಂದ್ರನ್‌ ಅವರ ನಿವಾಸದೆದುರು ನೂರಾರು ಯುವಮೋರ್ಚಾ ಕಾರ್ಯಕರ್ತರು ಜಮಾವಣೆಗೊಂಡಾಗ ಕಲ್ಲು ತೂರಾಟವೂ ನಡೆದಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಹಲವರು ಬ್ಯಾರಿಕೇಡ್‌ಗಳನ್ನು ಕಿತ್ತೆಸೆಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಅಶ್ರವಾಯು ಸಿಡಿಸಿ ಪ್ರತಿಭಟನಾ ನಿರತರನ್ನು ಚದುರಿಸಿದರು.

No Comments

Leave A Comment