Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ತಂದೆ ಸಮ್ಮುಖದಲ್ಲೇ ಮರಣದಂಡನೆ

ಲಾಹೋರ್: ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದ ಸರಣಿ ಹಂತಕನನ್ನು ಬುಧವಾರ ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು ಎಂದು ಮಾಧ್ಯಮದ ವರದಿ ತಿಳಿಸಿದೆ.

ಲಾಹೋರ್ ನಿಂದ 50 ಕಿಲೋ ಮೀಟರ್ ದೂರದಲ್ಲಿರುವ ಕಾಸೌರ್ ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪದಡಿಯಲ್ಲಿ ಇಮ್ರಾನ್ ಅಲಿ ದೋಷಿ ಎಂದು ಪಾಕಿಸ್ತಾನ ಕೋರ್ಟ್ ಆದೇಶ ನೀಡಿತ್ತು. ಇಂದು ಬೆಳಗ್ಗೆ ಕೋಟ್ ಲಾಕ್ಪತ್ ಸೆಂಟ್ರಲ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು ಎಂದು ವರದಿ ಹೇಳಿದೆ.

ಬಾಲಕಿಯ ತಂದೆ, ಚಿಕ್ಕಪ್ಪ ಹಾಗೂ ಮ್ಯಾಜಿಸ್ಟ್ರೇಟ್ ಅದಿಲ್ ಸರ್ವಾರ್ ಸಮ್ಮುಖದಲ್ಲಿ ಅಪರಾಧಿಯನ್ನು ನೇಣಿಗೆ ಏರಿಸಲಾಯಿತು ಎಂದು ದ ಡಾನ್ ವರದಿ ವಿವರಿಸಿದೆ.

No Comments

Leave A Comment