Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಕೀರ್ತಿಗೌಡ ಅವರು ನೀಡಿದ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಎಫ್‍ಐಆರ್ ದಾಖಲು ಮಾಡಲಾಗಿದೆ.ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಈಗಾಗಲೇ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಪ್ರಕರಣ ದಾಖಲಾಗಿತ್ತು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 326 ಸೆಕ್ಷನ್ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದು, ಈ ಬಗ್ಗೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಲಿದ್ದಾರೆ.

ದುನಿಯಾ ವಿಜಯ್ ಕಳೆದ ತಿಂಗಳು ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಗೌಡ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ.

No Comments

Leave A Comment