Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಕಮಲ ಕೋಟೆ ಗಣಿನಾಡು ಮತ್ತೆ “ಕೈ” ವಶ; ದಾಖಲೆ ಬರೆದ ವಿಎಸ್ ಉಗ್ರಪ್ಪ

ಬಳ್ಳಾರಿ: ಜಿದ್ದಾಜಿದ್ದಿಯ ಅಖಾಡವಾಗಿದ್ದ ಗಣಿನಾಡು ಬಳ್ಳಾರಿಯಲ್ಲಿ ಮತ್ತೆ ಕಾಂಗ್ರೆಸ್ ಜಯಭೇರಿ ಬಾರಿಸುವ ಮೂಲಕ ಬಿಜೆಪಿ ಕೋಟೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ 4,44,341 ಮತ ಪಡೆದು ಜಯಭೇರಿ ಬಾರಿಸಿದ್ದರೆ, ಬಿಜೆಪಿಯ ಜೆ.ಶಾಂತಾ 2,70,041 ಮತ ಗಳಿಸಿ ಸೋಲುಂಡಿದ್ದಾರೆ.

1951ರಿಂದ 2000ನೇ ಇಸವಿವರೆಗೆ ಬಳ್ಳಾರಿ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿತ್ತು. 2004ರಲ್ಲಿ ಬಿಜೆಪಿ ಅಭ್ಯರ್ಥಿ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಗೆಲುವು ಸಾಧಿಸಿ ಕಾಂಗ್ರೆಸ್ ಕೋಟೆಗೆ ಲಗ್ಗೆ ಇಟ್ಟಿದ್ದರು. ತದನಂತರ 2009ರಲ್ಲಿ ರೆಡ್ಡಿ ಸಹೋದರಿ ಜೆ.ಶಾಂತಾ ಬಿಜೆಪಿ ಸಂಸದೆಯಾಗಿ ಆಯ್ಕೆಯಾಗಿದ್ದರು, 2014ರಲ್ಲಿ ರೆಡ್ಡಿ ಆಪ್ತ ಗೆಳೆಯ ಬಿ.ಶ್ರೀರಾಮುಲು ಬಿಜೆಪಿಯ ಸಂಸದರಾಗಿದ್ದರು.  ಮೊಳಕಾಲ್ಮೂರು ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಇದೀಗ ದೀರ್ಘಕಾಲದ ಬಳಿಕ ಪ್ರತಿಷ್ಠೆಯ ಕಣವಾಗಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಗೆಲುವು ಸಾಧಿಸುವ ಮೂಲಕ ಗಣಿನಾಡನ್ನು ಕೈವಶ ಮಾಡಿಕೊಂಡಿದೆ.

No Comments

Leave A Comment