Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

6 ದಿನಗಳ ಆರ್‌ಎಸ್‌ಎಸ್‌ ಸಭೆ ; ರಾಮ ಮಂದಿರವೇ ಮುಖ್ಯ ಅಜೆಂಡಾ

ವಾರಣಾಸಿ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು 6 ದಿನಗಳ ಕಾಲ ವಾರಣಾಸಿ ಭೇಟಿಯಲ್ಲಿದ್ದು  ಪ್ರಮುಖ ಸಭೆಗಳಲ್ಲಿ ಭಾಗಿಯಾಗಿ ಮಹತ್ವದ ಚರ್ಚೆ ನಡೆಸಲಿದ್ದಾರೆ. ಸ್ವಕ್ಷೇತ್ರ ವಾರಣಾಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಮುನ್ನಾ ದಿನ ಈ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.

ನವೆಂಬರ್‌ 11 ರಿಂದ ನವೆಂಬರ್‌ 16 ರ ವರೆಗೆ ಆರ್‌ಎಸ್‌ಎಸ್‌ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವೇ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.

 ಪ್ರಧಾನಿ ನರೇಂದ್ರ ಮೋದಿ  ಮತ್ತು ಮೋಹನ್‌ ಭಾಗವತ್‌ ಅವರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಯಾವುದೇ ವಿವರಗಳು ಲಭ್ಯವಾಗಿಲ್ಲ.

No Comments

Leave A Comment