Log In
BREAKING NEWS >
ನೂತನ ಗೋವಾ ಸಿಎಂ ಪ್ರಮೋದ್‌ ಸಾವಂತ್‌ಗೆ ಬುಧವಾರ ಸದನ ಬಲ ಪರೀಕ್ಷೆ...

ಸುದೀರ್ಘ‌ ವಿಚಾರಣೆ ಬಳಿಕ ಸಿಸಿಬಿ ಪೊಲೀಸರಿಂದ ಜನಾರ್ದನ ರೆಡ್ಡಿ ಬಂಧನ

ಬೆಂಗಳೂರು: ಚಿನ್ನದ ಗಟ್ಟಿ ಪಡೆದ ಆರೋಪ ಹೊತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು  ಭಾನುವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರು ಸುದೀರ್ಘ‌ 20 ಗಂಟೆಯ ಅವಧಿಯ ಒಳಗೆ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದಾರೆ. ರೆಡ್ಡಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ,ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತಿದೆ ಎಂದು ವರದಿಯಾಗಿದೆ.

ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆ್ಯಂಬಿಡೆಂಟ್‌ ಕಂಪನಿಯ ಮಾಲೀಕ ಸೈಯದ್‌ ಅಹಮದ್‌ ಫ‌ರೀದ್‌ ಬಳಿ 57 ಕೆ.ಜಿ. ಚಿನ್ನದ ಗಟ್ಟಿ ಪಡೆದ ಆರೋಪ ಜನಾರ್ದನ ರೆಡ್ಡಿ ಅವರ ಮೇಲಿದೆ. ಈ ಪ್ರಕರಣದಲ್ಲಿ ಸುಳಿವು ನೀಡದೇ ನಾಪತ್ತೆಯಾಗಿದ್ದ ಗಾಲಿ ಜನಾರ್ದನ ರೆಡ್ಡಿ,ಶನಿವಾರ  ತಾವಾಗಿಯೇ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.

No Comments

Leave A Comment