Log In
BREAKING NEWS >
Smriti Irani says writing on the wall for Rahul Gandhi...

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ರೆಬೋನ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನಲೆಯಲ್ಲಿ ಸೇನಾಪಡೆಗಳು ಭಾರೀ ಕಾರ್ಯಾಚರಣೆಗಿಳಿದಿದ್ದವು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.
ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್’ಕೌಂಟರ್ ಸ್ಥಳದತ್ತ ಸುಳಿಯದಂತೆ ನಾಗರೀಕರಿಗೆ ಸೂಚನೆ ನೀಡಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಸ್ಫೋಟಕ ವಸ್ತುಗಳಿರುವ ಶಂಕೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ.
No Comments

Leave A Comment