Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಜಮ್ಮು-ಕಾಶ್ಮೀರ: ಶೂಪಿಯಾನ್ ಎನ್ ಕೌಂಟರ್ ನಲ್ಲಿ ಆರು ಉಗ್ರರ ಹತ್ಯೆ

ಶೂಪಿಯಾನ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೂಪಿಯಾನ್  ಬಳಿ ಇಂದು ನಡೆದ ಎನ್ ಕೌಂಟರ್ ನಲ್ಲಿ  ಆರು  ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ಶೂಪಿಯಾನ್ ಜಿಲ್ಲೆಯ ಕರ್ಪಾನ್ ಬಾಟಗುಂಡಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದು  ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.

 ಈ ವೇಳೆಯಲ್ಲಿ  ಅಪಾರ ಪ್ರಮಾಣದ ಶಸಾಸ್ತ್ರಗಳನ್ನು  ವಶಕ್ಕೆ ಪಡೆದುಕೊಂಡಿದ್ದಾರೆ.ಕಾರ್ಯಾಚರಣೆ  ವೇಳೆ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.ಶೂಪಿಯಾನ್  ಜಿಲ್ಲೆಯ ನಾದಿಗಾಮ್ ಗ್ರಾಮದಲ್ಲಿ ಕಳೆದ ವಾರ ನಡೆದ ಕಾರ್ಯಾಚರಣೆ ವೇಳೆಯಲ್ಲಿ ನಾಲ್ಕು  ಉಗ್ರರನ್ನು ಹತ್ಯೆಗೈಯಲಾಗಿತ್ತು. ಈ ಕಾರ್ಯಾಚರಣೆ ವೇಳೆ ನಾಲ್ವರು  ಸೇನಾ ಯೋಧರು ಹುತಾತ್ಮ ರಾಗಿದ್ದರು.

No Comments

Leave A Comment