Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದೆಹಲಿ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ಲಕ್ಷಕ್ಕೂ ಅಧಿಕ ರೈತರಿಂದ ಬೃಹತ್ ಪ್ರತಿಭಟನೆ

ನವದೆಹಲಿ: ಸ್ವಾಮಿನಾಥನ್ ಸಮಿತಿ ವರದಿ ಜಾರಿ, ರೈತರ ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ  ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 200ಕ್ಕೂ ಹೆಚ್ಚು ರೈತ ಸಂಘಟನೆಗಳ ಒಂದು ಲಕ್ಷಕ್ಕೂ ಅಧಿಕ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್ ಸಿಸಿ) ಎರಡು ದಿನಗಳ ಕಾಲ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನಾನಿರತ ರೈತರು ದೆಹಲಿ, ಹಸ್ರತ್ ನಿಜಾಮುದ್ದೀನ್, ಬಿಜ್ವಾಸನ್, ಸಬ್ಜಿ ಮಂಡಿ ನಿಲ್ದಾಣ, ಎಎನ್ ವಿಟಿ ನಿಲ್ದಾಣ ಮತ್ತು ಮಂಜು ಕ ಟಿಕ್ಲಾದಿಂದ ರಾಮ್ ಲೀಲಾ ಮೈದಾನದವರೆಗೆ ಸಾಗಲಿದ್ದಾರೆ.ಕಳೆದ ಎರಡು ತಿಂಗಳಿನಿಂದ ರೈತರು ದೇಶದ ಹಲವು ಭಾಗಗಳಲ್ಲಿ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿನ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಅದು ಪ್ರತಿಭಟನೆಗೆ ತಿರುಗಿತು.ಮುಂಬೈಯ ಆಜಾದ್ ಮೈದಾನದಲ್ಲಿ ಕಳೆದ 22ರಂದು ಲೋಕ ಸಂಘರ್ಷ ಮೋರ್ಚ ಮುಂಬೈಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸಿದ್ದರು. ಜಮೀನಿನ ಒಡೆತನ ಮತ್ತು ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಒತ್ತಾಯಿಸಿದ್ದಾರೆ.

No Comments

Leave A Comment