Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬಸ್‌ಪಲ್ಟಿ:ಪಿಎಂ ರ‍್ಯಾಲಿಗೆ ಹೋಗುತ್ತಿದ್ದ 35 ವಿದ್ಯಾರ್ಥಿಗಳಿಗೆ ಗಾಯ

ಧರ್ಮಶಾಲಾ (ಹಿಮಾಚಲ ಪ್ರದೇಶ): ಇಲ್ಲಿ ಗುರುವಾರ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಗೆ ತೆರಳುತ್ತಿದ್ದ ಬಸ್ಸೊಂದು ಪಲ್ಟಿಯಾಗಿದ್ದು 35 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಂಗ್ರಾದ ಜವಾಲಿ ಎಂಬಲ್ಲಿ ಬಸ್‌ ಸ್ಕಿಡ್‌ ಆಗಿ ಗುಡ್ಡದ ಬದಿಯಲ್ಲಿ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಜನ್‌ ಆಭಾರ್‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಲುವಾಗಿ ತೆರಳುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ 1 ವರ್ಷ ಪೂರ್ಣ ಗೊಳಿಸಿದ ಸಂಭ್ರಮದಲ್ಲಿ ಈ ರ‍್ಯಾಲಿ ಆಯೋಜಿಸಲಾಗಿದೆ.

No Comments

Leave A Comment