Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

ಉ.ಪ್ರ ಬೋರ್ಡ್‌ ಪರೀಕ್ಷೆ : ಚೀಟಿಂಗ್‌ ಮಾಫಿಯಾ ವಿರುದ್ಧ NSA ಕೇಸು

ಲಕ್ನೋ : ಬೋರ್ಡ್‌ ಪರೀಕ್ಷೆಗಳಲ್ಲಿ ವಂಚನೆ ಮಾಡುವವರು ಮತ್ತು ಅವರಿಗೆ ಕುಮ್ಮಕ್ಕು ನೀಡುವವರನ್ನು ಅತ್ಯಂತ ಕಠಿನವಾದ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಶಿಕ್ಷಿಸಲಾಗುವುದು ಎಂದು ಉತ್ತರ ಪ್ರದೇಶ ಸರಕಾರ ಇಂದು ಹೇಳಿದೆ.

ಪರೀಕ್ಷೆ ಎದುರಿಸುವ ಸಹಸ್ರಾರು ಮಕ್ಕಳ ಭವಿಷ್ಯವನ್ನು ಉಳಿಸಲು ಬೋರ್ಡ್‌ ಪರೀಕ್ಷೆಗಳಲ್ಲಿ ವಂಚನೆ ನಡೆಸುವ ಮತ್ತು ಅವರಿಗೆ ಕುಮ್ಮಕ್ಕು ನೀಡುವವರ ವಿರುದ್ಧ ಎನ್‌ಎಸ್‌ಎ ಅಡಿ ಕಠಿನ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಈಗ ಒದಗಿದೆ; ಸರಕಾರ ಆ ಪ್ರಕಾರ ನಡೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ದಿನೇಶ್‌ ಶರ್ಮಾ ಎಚ್ಚರಿಕೆ ನೀಡಿದರು.

ಪರೀಕ್ಷೆಗಳಲ್ಲಿ ಉತ್ತರ ಪತ್ರಿಕೆಯನ್ನು ಬದಲಾಯಿಸುವುದು, ಸಮೂಹ ನಕಲು ಮಾಡುವುದರ ವಿರುದ್ಧ ಇನ್ನು ಮುಂದೆ ಮುಲಾಜಿಲ್ಲದೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದವರು ಹೇಳಿದರು. ಉತ್ತರ ಪ್ರದೇಶದಲ್ಲಿ ಬೋರ್ಡ್‌ ಪರೀಕ್ಷೆಗಳು ಫೆ.7ರಂದು ಪ್ರಾರಂಭವಾಗಲಿದ್ದು 16 ಕೆಲಸದ ದಿನಗಳಲ್ಲಿ ಅದು ನಡೆಯಲಿದೆ.

No Comments

Leave A Comment