Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಯಶ್‌ ಭೇಟಿಯಾಗಲಿಲ್ಲ ಎಂದು ಬೆಂಕಿ ಹಚ್ಚಿಕೊಂಡ ಅಭಿಮಾನಿ !; ಚಿಂತಾಜನಕ

ಬೆಂಗಳೂರು: ಜನ್ಮ ದಿನದಂದು ನೆಚ್ಚಿನ ನಟ ರಾಕಿಂಗ್‌ ಸ್ಟಾರ್‌ ಯಶ್‌ ಭೇಟಿಯಾಗಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ  ಅಭಿಮಾನಿಯೊಬ್ಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ರವಿ ಎಂಬಾತ ಹೊಸಕೇರಳ್ಳಿಯ ಯಶ್‌ ನಿವಾಸದ ಬಳಿ ಆಗಮಿಸಿದ್ದು , ಭೇಟಿಗೆ ಯತ್ನಿಸಿದ್ದಾನೆ. ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಬೆಂಕಿ ಹೊತ್ತಿ ಉರಿಯುತ್ತಿರುವಾಗಲೇ ರಸ್ತೆ ದಾಟಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ.

75% ಸುಟ್ಟಗಾಯಗಳಿಗೊಳಗಾಗಿರುವ ರವಿ ಬದುಕುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗಿದೆ.

ರವಿ ಮೊದಲೇ ಸೀಮೆ ಎಣ್ಣೆ ತಂದು ಆತ್ಮ ಹತ್ಯೆ ಮಾಡಿಕೊಳ್ಳುವ ಸಲುವಾಗಿಯೇ ಬಂದಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

No Comments

Leave A Comment