Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವ ಆರಂಭ…

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಬುಧವಾರದದಿ೦ದ ಸಪ್ತೋತ್ಸವ ಆರಂಭದ ಪ್ರಯುಕ್ತ ಪರ್ಯಾಯ ಮಠಾಧೀಶರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಹೆರ್ಗ ವೇದವ್ಯಾಸ ಭಟ್ ಪರ್ಯಾಯ ಮಠದ ದಿವಾನರಾದ ವೇದವ್ಯಾಸ ತಂತ್ರಿಗಳೊಂದಿಗೆ ದೇವತಾ ಪ್ರಾರ್ಥನೆ ನಡೆಯಿತು.

ತೆಪ್ಪೋತ್ಸವದ ನಂತರ ಉತ್ಸವ ಆರಂಭವಾಯಿತು.ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಭಂಡಾರಿಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಉತ್ಸವದಲ್ಲಿ ಭಾಗವಹಿಸಿದ್ದರು.

No Comments

Leave A Comment