Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪ್ರಿಯಾಂಕಾ ಆಗಮನ ಮೋದಿಯವರ ನಿದ್ದೆಗೆಡಿಸಿದೆ: ಜನಾರ್ದನ ಪೂಜಾರಿ

ಮಂಗಳೂರು: ಪ್ರಿಯಾಂಕಾ ಗಾಂಧಿ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ, ಇನ್ಮುಂದೆ ಪ್ರಧಾನಿ ನರೇಂದ್ರ ಮೋದಿಯವರ ನಿದ್ದೆಗೆಡಲಿದೆ ಎಂದು ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿ, ಉತ್ತರಪ್ರದೇಶ ಪೂರ್ವಭಾಗದ ಹೊಣೆಗಾರಿಕೆಯನ್ನು ನೀಡಲಾಗಿದೆ. ಪ್ರಿಯಾಂಕಾ ಗಾಂಧಿಯನ್ನು ಜನರು ಇಂದಿರಾ ಗಾಂಧಿಯಂತೆ ಕಾಣುತ್ತಿದ್ದಾರೆ ಎಂದು ಬಣ್ಣಿಸಿದರು.

ಪ್ರಿಯಾಂಕಾ ಗಾಂಧಿ ಆಗಮನದಿಂದ ರಾಷ್ಟ್ರರಾಜಕಾರಣದ ಚಿತ್ರಣ ಬದಲಾಗಿದೆ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಿಷ್ಠ ಮಾಡಬೇಕು ಎಂದು ಸಲಹೆ ನೀಡಿದರು.

ಅಲ್ಲದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಲಾಭವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಂದಾಗಿ ಕಾಂಗ್ರೆಸ್ ಗೆ ಲಾಭಕ್ಕಿಂತ ಹೆಚ್ಚು ನಷ್ಟವೇ ಆಗಿದೆ ಎಂದರು.

ನಾನೂ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದು, ನನಗೆ ಟಿಕೆಟ್ ನೀಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ ಅವರು, ಈ ಕಾರಣಕ್ಕಾಗಿ ದೆಹಲಿಗೆ ಭೇಟಿ ನೀಡಿ ಟಿಕೆಟ್ ಕ್ಕಾಗಿ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.

No Comments

Leave A Comment