Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಟೀಮ್ ಇಂಡಿಯಾ ಆಲ್ ರೌಂಡ್ ಸಾಹಸ: ಕಿವೀಸ್ ವಿರುದ್ಧ ಭರ್ಜರಿ ಜಯ

ಬೇ ಓವಲ್ : ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆತಿಥೇಯ ನ್ಯೂಜಿಲ್ಯಾಂಡ್  ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ 90 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಬ್ಯಾಟ್ಸಮನ್ ಗಳು ಉತ್ತಮ ಆಟವಾಡಿ 4 ವಿಕೆಟ್ ನಷ್ಟಕ್ಕೆ 324 ರನ್ ಕಲೆಹಾಕಿದರು, . ಆರಂಭಿಕರಾದ ಶಿಖರ್ ಧವನ್ ಮತ್ತು ರೋಹಿತ್ ಶರ್ಮ ಮೊದಲ ವಿಕೆಟ್ ಗೆ 154 ಜೊತೆಯಾಟ ನಡೆಸಿದರು. ಧವನ್ 66 ರನ್ ಗಳಿಸಿದರೆ ರೋಹಿತ್ 87 ರನ್ ಗಳಿಸಿ ಔಟ್ ಆದರು. ನಾಯಕ ಕೊಹ್ಲಿ43  ರನ್ ಗಳಿಸಿದರೆ ಅಂಬಟಿ ರಾಯುಡು 47 ರನ್ ಕಲೆಹಾಕಿ ಫಾರ್ಮ್ ಗೆ ಮರಳುವ ಸೂಚನೆ ನೀಡಿದರು. ಕೊನೆಯಲ್ಲಿ ಧೋನಿ ಅಜೇಯ 48 ರನ್ ಮತ್ತು ಕೇದಾರ್ ಜಾಧವ್ 22 ರನ್ ಗಳಿಸಿದರು .

235 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ ನಿರಂತರ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. 40.2 ಓವರ್ ನಲ್ಲಿ 234 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕುಲದೀಪ್ ಯಾದವ್ ಕಿವೀಸ್ ಬ್ಯಾಟ್ಸಮನ್ ಗಳಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದರು. ಬ್ರೇಸ್ ವೆಲ್ ಬಿಟ್ಟರೆ ಬೇರೆ ಯಾವುದೇ ಆಟಗಾರರು ಕ್ರೀಸ್ ಕಚ್ಚಿ ಆಡಲು ವಿಫಲರಾದರು . ಬ್ರೇಸ್ ವೆಲ್ 57 ರನ್ ಗಳಿಸಿದರು. ಕುಲದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು.

No Comments

Leave A Comment