Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪುಲ್ವಾಮಾ ಎನ್‌ಕೌಂಟರ್‌: ಉಗ್ರನ ಹತ್ಯೆ, ಓರ್ವ ಜವಾನ ಹುತಾತ್ಮ

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಮಂಗಳವಾರ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿರುವ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿ ಓರ್ವ ಸೇನಾ ಜವಾನ  ಹುತಾತ್ಮನಾಗಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪುಲ್ವಾಮಾದ ರತ್ನಿಪೋರಾದಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಜವಾನ ಗಾಯಗೊಂಡಿರುವುದಾಗಿ ಮೂಲಗಳು ಹೇಳಿವೆ. ಗಾಯಾಳುವನ್ನು ಒಡನೆಯೇ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ನೀಡಲಾಗಿದ್ದು ಆತನು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಎನ್‌ಕೌಂಟರ್‌ ಬಳಿಕದಲ್ಲಿ ಭದ್ರತಾ ಪಡೆಗಳು ರತ್ನಿಪೋರಾ ಪ್ರದೇಶದಲ್ಲಿ ಅಡಗಿಕೊಂಡಿರಬಹುದಾದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದೆ.

No Comments

Leave A Comment