Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ರಾಯಚೂರು: ನೀರಿನ ಟ್ಯಾಂಕ್ ಕುಸಿದು ಐವರು ಸಾವು

ರಾಯಚೂರು: ಇತ್ತೀಚಿಗಷ್ಟೇ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್‌ವೊಂದು ಕುಸಿದು ಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಸಂಭವಿಸಿದೆ.

ನೀರು ತುಂಬಿದ್ದ ಟ್ಯಾಂಕ್ ದಿಢೀರ್ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲಿದ್ದ ಐವರು ಮೃತಪಟ್ಟಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ನಾಗರಾಜ್ ಅವರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದ್ದೆ. ಕಳಪೆ ಕಾಮಗಾರಿಯೇ ಟ್ಯಾಂಕ್ ಕುಸಿಯಲು ಕಾರಣ ಎನ್ನಲಾಗುತ್ತಿದೆ.

No Comments

Leave A Comment