Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಅತ್ಯಾಚಾರಿಗೆ ಸಾರ್ವಜನಿಕರ ಗೂಸಾ

ಬೆಂಗಳೂರು: ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಸಾರ್ವಜನಿಕರೇ ಹಿಡಿದು ಥಳಿಸಿರುವ ಘಟನೆ ಎಚ್‌ಎಎಲ್ ವಿಮಾನ ನಿಲ್ದಾಣ ಬಳಿ ಸಂಭವಿಸಿದೆ.

ಹಳೇ ವಿಮಾನ ನಿಲ್ದಾಣ ರಸ್ತೆ ನಿವಾಸಿ ಕಿಶೋರ್(20) ಬಂಧಿತ. ಕುಡಿಯುವ ನೀರಿನ ಕ್ಯಾನ್ ಪೂರೈಕೆ ಮಾಡುತ್ತಿದ್ದ ಕಿಶೋರ್, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಸಮೀಪ ಚಿಂದಿ ಆಯುತ್ತಿದ್ದ 40 ವರ್ಷದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಿಶೋರ್‌ನ ಬೆನ್ನಟ್ಟಿ ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ತಮಿಳುನಾಡಿನವರಾಗಿದ್ದು 15 ದಿನಗಳ ಹಿಂದಷ್ಟೇ ನಗರಕ್ಕೆ ಆಗಮಿಸಿದ್ದಾರೆ.

ಘಟನೆ ಸಂಬಂಧ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

No Comments

Leave A Comment