Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶ್‌ಪಾಂಡೆ ವಿರುದ್ದ ಲೋಕಾಯುಕ್ತ ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.

2001ರಲ್ಲಿ ಕೈಗಾರಿಕೆ ಸಚಿವರಾಗಿದ್ದ ದೇಶ್‌ಪಾಂಡೆ ಅವರು ಐಟಿ ಕಾರಿಡಾರ್‌ ಯೋಜನೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ವಾಸದೇವ ರೆಡ್ಡಿ ಎನ್ನುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.

ದೂರನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ಡಿವೈಎಸ್‌ಪಿಗೆ ಆದೇಶ ನೀಡಿದೆ.

70 ಎಕರೆಗೂ ಹೆಚ್ಚು ಜಮೀನನ್ನು ಭೂಸ್ವಾಧೀನ ದಿಂದ ಕೈಬಿಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

No Comments

Leave A Comment