Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ವಿಶ್ವಾಸಮತಕ್ಕು ಮುನ್ನವೇ ಬಿಹಾರ ಸಿಎಂ ಜಿತನ್ ರಾಮ್ ಮಾಂಝಿ ರಾಜಿನಾಮೆ

ಪಾಟ್ನಾ: ಬಹುಮತ ಸಾಬೀತಿಗೂ ಮುನ್ನವೇ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಮೂಲಕ 14 ದಿನಗಳ ಬಿಹಾರ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಿದೆ.

ಬಿಹಾರದಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಜಿತನ್ ರಾಮ್ ಮಾಂಝಿ ಅವರು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕಿತ್ತು. ಆದರೆ ತಾವು ವಿಶ್ವಾಸ ಮತ ಗೆಲ್ಲುವುದು ಸಾಧ್ಯವಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಮಾಂಝಿ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರಿಗೆ ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ.

ಮಾಂಝಿ ರಾಜಿನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು, ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಮಾಂಝಿಗೆ ಸೂಚಿಸಿದ್ದಾರೆ.

ಜೆಡಿಯುನ 12 ಶಾಸಕರು ಮಾತ್ರ ಮಾಂಝಿ ಬೆಂಬಲ ನಿಂತಿದ್ದರು. ಅಲ್ಲದೆ ಬಿಜೆಪಿಯ 87 ಶಾಸಕರು ಸಹ ಮಾಂಝಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. ಅಂದರೆ ಒಟ್ಟು 99 ಆಗುತ್ತದೆ. ಆದರೆ ಬಹುಮತಕ್ಕೆ ಬೇಕಿರುವುದು 117 ಸ್ಥಾನಗಳು. ಹೀಗಾಗಿ ಮಾಂಝಿ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಜೆಡಿಯು ನಾಯಕ ನಿತೀಶ್ ಕುಮಾರ್ ಅವರಿಗೆ 120 ಶಾಸಕರ ಬೆಂಬಲವಿದ್ದು, ಅವರು ಮತ್ತೊಮ್ಮೆ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದು ಬಹುತೇಕ ಖಚಿತವಾಗಿದೆ.

ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಜಿತನ್ ರಾಮ್ ಮಾಂಝಿ ಅವರನ್ನು ಜೆಡಿಯುನಿಂದ ಉಚ್ಚಾಟಿಸಲಾಗಿತ್ತು. ಅಲ್ಲದೆ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೆಡಿಯು ನೂತನ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಫೆ.12ರಂದು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಫೆ.20ಕ್ಕೆ ಬಹುಮತ ಸಾಬೀತುಪಡಿಸುವಂತೆ ಮಾಂಝಿಗೆ ಸೂಚಿಸಿದ್ದರು.

No Comments

Leave A Comment