Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ನಕ್ಸಲ್ ದಾಳಿ: 2 ಅಧಿಕಾರಿಗಳಿಗೆ ಗಾಯ

ರಾಯಪುರ: ಛತ್ತೀಸ್‌ಗಡದ ಬಿಜಾಪುರದ ಬಳಿ ನಕ್ಸಲರು ನೆಲಬಾಂಬ್ ಸ್ಫೋಟಿಸಿದ ಪರಿಣಾಮ 2 ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ನಕ್ಸಲ್ ಪೀಡಿತ ಪ್ರದೇಶ ಬಿಜಾಪುರದ ಬಳಿ ನಕ್ಸಲರಿಗಾಗಿ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮುಖ್ಯ ಪೇದೆ ರಾಜೇಶ್ ಹಾಗೂ ಸಹಾಯಕ ಪೇದೆ ಅಶ್ರಮ್ ನೇತಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ

No Comments

Leave A Comment