Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮುಂಬಯಿಯಿಂದ ನಾಪತ್ತೆಯಾದ ವ್ಯಕ್ತಿಯ ಶವ ನೇತ್ರಾವತಿ ದಡದಲ್ಲಿ ಪತ್ತೆ

ಬೆಳ್ತಂಗಡಿ : ಕಳೆದ ವರ್ಷ ನವೆಂಬರ್‌ ತಿಂಗಳಿನಿಂದ ನಾಪತ್ತೆಯಾದ ಮುಂಬಯಿ ನಿವಾಸಿ ರಾಮದಾಸ್‌ ಪೂಜಾರಿ (61) ಎನ್ನುವವರ ಶವ  ಧರ್ಮಸ್ಥಳ ಬಳಿ ನೇತ್ರಾವತಿ ದಡದ ಪೊದೆಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆಂದು ಬಂದಿದ್ದ ರಾಮದಾಸ್‌ ಅವರು ನಾಪತ್ತೆಯಾಗಿದ್ದರು . ಈ ಸಂಬಂಧ ರಾಮದಾಸ್‌ ಮನೆಯವರು ಮುಂಬಯಿಯ  ಪೊಲೀಸ್‌ ಠಾಣೆಯಲ್ಲಿದೂರು ಸಲ್ಲಿಸಿದ್ದರು.

ಪ್ರಕರಣದ ತನಿಖೆಗೆಂದು ರಾಜ್ಯಕೆ ಆಗಮಿಸಿದ್ದ ಪೊಲೀಸರು ಗುರುವಾರ ಹಾಸನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ರಾಮದಾಸ್‌ ಅವರನ್ನು ಕೊಲೆಗೈದು ನೇತ್ರಾವತಿ ದಡದಲ್ಲಿ ಬಿಸಾಡಿರುವ ವಿಚಾರ ಬೆಳಕಿಗೆ ಬಂದಿದೆ.

ರಾಮ್‌ದಾಸ್‌ ಅವರ ಮೊಬೈಲ್‌ ನೆಟ್‌ವರ್ಕ್‌ ಜಾಡು ಬೆನ್ನಟ್ಟಿ ಪ್ರಕರಣವನ್ನು ಬೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ದಕ್ಷಿಣ ಕನ್ನಡ ಎಸ್‌ಪಿ ಡಾ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment