Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ

ನವದೆಹಲಿ: ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಮಮತಾ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ನಿನ್ನೆ ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ ಇಲಾಖೆಯ ಅಧಿಕಾರಿಗಳು ಪಾಂಜಾ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸರ ಸೂಚನೆ ಮೇರೆಗೆ ಪಾಂಜಾ ಅವರನ್ನು ಬಂಧಿಸಲಾಗಿದೆ. ಖಾಸಗಿ ಟಿವಿ ಚಾನೆಲ್‌ನ ನಿರ್ಮಾಪಕ ಮತ್ತು ಕೈಗಾರಿಕೋದ್ಯಮಿಯಾಗಿರುವ ಪಾಂಜಾ ಅವರನ್ನು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

No Comments

Leave A Comment