Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಬಾಂಗ್ಲಾದೇಶದಲ್ಲಿ ಬೋಟ್ ಮುಳುಗಿ 150 ಮಂದಿ ಜಲಸಮಾಧಿ?

ಢಾಕಾ: ಸುಮಾರು 200 ಮಂದಿ ಪ್ರಯಾಣಿಕರನ್ನು ತುಂಬಿಸಿಕೊಂಡು ಸಾಗುತ್ತಿದ್ದ ಮಿನಿ ಬೋಟ್ ವೊಂದು ಸರಕು ಸಾಗಣೆ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿದ್ದು, 150ಕ್ಕೂ ಅಧಿಕ ಪ್ರಯಾಣಿಕರು ಕಣ್ಮರೆಯಾಗಿರುವ ಭೀಕರ ಘಟನೆ ಭಾನುವಾರ ಬಾಂಗ್ಲಾದೇಶದಲ್ಲಿ ನಡೆದಿದೆ.

ಮಿನಿ ಬೋಟ್ ವೊಂದು ಕಾರ್ಗೋ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿರುವುದಾಗಿ ಮಾಣಿಕ್ ಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಿದ್ದಾರೆ.

ಇದರಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಇಲ್ಲವೇ ಕಣ್ಮರೆಯಾಗಿದ್ದಾರೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಎಂದು ಹೇಳಿದ್ದಾರೆ. ಸ್ಥಳೀಯರ ನೆರವಿನಿಂದ 40&50 ಮಂದಿ ಈಜಿ ದಡ ಸೇರಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಬೋಟ್ ಮುಳುಗಿರುವ ಪದ್ಮಾ ಹೊಳೆಯಲ್ಲಿ ರಕ್ಷಣಾ ತಂಡ ಕಾರ್ಯನಿರತವಾಗಿದೆ. ಬಾಂಗ್ಲಾದೇಶದಲ್ಲಿ ಬೋಟ್ ದುರಂತ ಸಾಮಾನ್ಯವಾಗಿದೆ. ಅದಕ್ಕೆ ಮುಖ್ಯ ಕಾರಣ, ಸೂಕ್ತವಾದ ಸುರಕ್ಷತಾ ಕ್ರಮ ಕೈಗೊಳ್ಳದಿರುವುದಾಗಿದೆ.

No Comments

Leave A Comment