Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ದೇಶಪಾಂಡೆ ಹಗರಣದ ಬಗ್ಗೆ ಸಿಎಂ ಸಿದ್ದು ಬಳಿ ವಿವರಣೆ ಕೇಳಿದ ಸೋನಿಯಾ

ಬೆಂಗಳೂರು: ಐಟಿ ಕಾರಿಡಾರ್ ಯೋಜನೆಯಲ್ಲಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅಕ್ರಮವಾಗಿ ಭೂಮಿ ಪಡೆದಿದ್ದಾರೆ ಎಂಬ ಆರೋಪ ಮತ್ತು ಲೋಕಾಯುಕ್ತ ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಸಂಪೂರ್ಣ ವಿವರ ಕೇಳಿದ್ದಾರೆಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಖಾಸಗಿ ವಾಹಿನಿ ವರದಿ ತಿಳಿಸಿದೆ.

ಆರ್.ವಿ.ದೇಶಪಾಂಡೆ ವಿರುದ್ಧದ ಹಗರಣದ ಆರೋಪದ ಬಗ್ಗೆ ಮಾಹಿತಿ ಕೊಡಿ ಎಂದು ಸಿದ್ದರಾಮಯ್ಯನವರಲ್ಲಿ ಸೋನಿಯಾ ಗಾಂಧಿ ವಿವರಣೆ ಕೇಳಿದ್ದಾರೆಂದು ಮೂಲಗಳು ಹೇಳಿವೆ. ಸಿದ್ದರಾಮಯ್ಯನವರು ಆ ಬಗ್ಗೆ ಸಮಜಾಯಿಷಿ ನೀಡಿದ್ದಾರೆನ್ನಲಾಗಿದೆ.

2001ರಲ್ಲಿ ಆರ್.ವಿ.ದೇಶಪಾಂಡೆ ಭಾರೀ ಕೈಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ಐಟಿ ಕಾರಿಡಾರ್ ಯೋಜನೆಯಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಲೋಕಾಯುಕ್ತ ಕೋರ್ಡ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಕೋರ್ಟ್ ಹಾಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾದ ಆರ್.ವಿ.ದೇಶಪಾಂಡೆ ವಿರುದ್ಧ ತನಿಖೆ ನಡೆಸುವಂತೆ ಆದೇಶ ನೀಡಿತ್ತು.

No Comments

Leave A Comment