Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜನಾರ್ದನ ತೋನ್ಸೆ

ಉಡುಪಿ : ಕಾಂಗ್ರೆಸ್‌ ಮುಖಂಡ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜನಾರ್ದನ ತೋನ್ಸೆ ಅವರನ್ನು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸರಕಾರ ನೇಮಿಸಿದ್ದು, ಮಾ. 4ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ನಾಲ್ಕು ದಶಕಗಳಿಂದ ಜನಾರ್ದನ ತೋನ್ಸೆ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರು. ಬ್ಲಾಕ್‌ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ (ಉತ್ತರ ವಲಯ) ಸಂಘಟನ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷರಾಗಿದ್ದ ತೋನ್ಸೆ ಅವರು ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದಂದಿನಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

No Comments

Leave A Comment