Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಕಾರ್ಮಿಕರ ಸಮಸ್ಯೆಗೆ ಸೂಕ್ತ ಪರಿಹಾರ : ಪಿ.ಟಿ. ಪರಮೇಶ್ವರ್ ನಾಯ್ಕ

ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಸಚಿವರಾದ ಮಾನ್ಯ ಶ್ರೀ ಪಿ.ಟಿ. ಪರಮೇಶ್ವರ ನಾಯ್ಕ ರವರು ಉಡುಪಿ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸ್ಥಳೀಯವಾಗಿ ಎದುರಿಸುತ್ತಿರುವ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ ವಲಸೆ ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರಲ್ಲಿ ತಿಳಿಸಿ, ಸಮಸ್ಯೆಗೆ ಪರಿಹಾರ ಒದಗಿಸುವಂತೆ ಕೋರಿದರು.

ಸಚಿವರು ಮಾತನಾಡಿ ಎಲ್ಲಾ ಕಾರ್ಮಿಕರನ್ನು ನೋಂದಣಿ ಮಾಡಿಸುವುದರೊಂದಿಗೆ, ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು ಸಿಗುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ. ಕೃಷ್ಣರಾಜ ಸರಳಾಯ, ಜಿಲ್ಲಾ ಇಂಟಕ್ ಅಧ್ಯಕ್ಷರಾದ ಮುರಳಿ ಎ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕೋಶಾಧಿಕಾರಿ ವಾಸುದೇವ ಯಡಿಯಾಳ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಜೆ. ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಕಾಶ್ ಕೊಡವೂರು, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಾಕೋಬ್ ಡಿ’ಸೋಜ, ನಗರಸಭಾ ಅಧ್ಯಕ್ಷರಾದ ಯುವರಾಜ್ ಪಿ., ಯುವ ಕಾಂಗ್ರೆಸ್ ಮುಖಂಡರುಗಳಾದ ಅಬ್ದುಲ್ ಅಜೀಜ್ ಹೆಜಮಾಡಿ, ಕಿರಣ್ ಕುಮಾರ್ ಉದ್ಯಾವರ, ಸುಜಯ ಪೂಜಾರಿ, ಕಾಂಗ್ರೆಸ್ ಮುಖಂಡರುಗಳಾದ ಅಮೃತ್ ಶೆಣೈ, ಹಬೀಬ್ ಆಲಿ, ನಾಗೇಶ್ ಕುಮಾರ್ ಉದ್ಯಾವರ, ಮನೋಜ್ ಕರ್ಕೇರಾ, ರಹಮತ್ತುಲ್ಲ, ಭಾಸ್ಕರ್ ರಾವ್ ಕಿದಿಯೂರು, ರಘುಪತಿ ಬಲ್ಲಾಳ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಅಕ್ಷಯ್ ರಾವ್, ಗಣೇಶ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಯು. ಶಬ್ಬೀರ್ ಅಹ್ಮದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿಯವರು ವಂದಿಸಿದರು.

No Comments

Leave A Comment