Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ದೇಶದ ಸಮಗೃ ಅಭಿವೃದ್ದಿಗೆ ‘ಟೀಮ್‌ ಇಂಡಿಯಾ’ ಸ್ಪೂರ್ತಿ ಅಗತ್ಯ: ಮೋದಿ

ಕೋಲ್ಕತಾ : ಭಾರತವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲು ‘ಟೀಮ್‌ ಇಂಡಿಯಾ’ ಸ್ಪೂರ್ತಿಯೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯಶೀಲವಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಬರ್‍ನಾಪುರದಲ್ಲಿ 16,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಉಕ್ಕು ಪ್ರಾಧಿಕಾರದ ನವೀನ ತಂತ್ರಜ್ಞಾನದ ಐಐಎಸ್‌ಸಿಒ ಉಕ್ಕು ಸ್ಥಾವರನ್ನು ದೇಶಕ್ಕೆ ಸಮರ್ಪಣೆ ಮಾಡಿ ಅವರು ಮಾತನಾಡಿದರು.

ಭಾರತ-ಮತ್ತು ಬಾಂಗ್ಲಾದೇಶದ ನಡುವಿನ ಸಮಸ್ಯೆಯನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ‘ಟೀಮ್‌ ಇಂಡಿಯಾ’ ಸ್ಪೂರ್ತಿಯೊಂದಿಗೆ ಒಪ್ಪಂದಗಳ ಮೂಲಕ ಬಗೆಹರಿಸಿಕೊಳ್ಳಬಹುದು .ದೇಶದೊಳಗಿನ ಸಮಸ್ಯೆಗಳನ್ನೂ ಇದೇ ಸ್ಪೂರ್ತಿಯಲ್ಲಿ ಸುಲಭವಾಗಿ ಬಗೆ ಹರಿಸಬಸುದು ಎಂದರು.

ನನ್ನ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಯಾವುದೇ ಹಗರಣ ವರದಿಯಾಗಿಲ್ಲ ಎಂದರು.

ರಾಜಕೀಯ ಭಿನ್ನಾಭಿಪ್ರಾಯಗಳು ಇರಲೇಬೇಕು ಆದರೆ ಅದು ಅಭಿವೃದ್ದಗೆ ಮಾರಕವಾಗಬಾರದು. ಬಹುಕಾಲದಿಂದ ಭಿನ್ನಾಭಿಪ್ರಾಯಗಳು ಅಭಿವೃದ್ದಿಯನ್ನು ಕುಂಠಿತಗೊಳಿಸಿವೆ ಎಂದು ವಿಷಾದ ವ್ಯಕ್ತ ಪಡಿಸಿದರು.

ಸಮಾರಂಭದಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಕೆಸರೀನಾಥ ತ್ರಿಪಾಠಿ , ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ,ಕೇಂದ್ರ ಸಚಿವರಾದ ನರೇಂದ್ರ ಸಿಂಗ್‌ ತೋಮರ್‌,ವಿಷ್ಣು ದೇವ್‌ ಸಾಯ್‌, ಬಾಬು ಸುಪ್ರಿಯೊ ಮತ್ತು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಪ್ರಧಾನಿ ಮೋದಿ ಕೋಲ್ಕತಾದ ಇತಿಹಾಸ ಪ್ರಸಿದ್ದ ದಕ್ಷಿಣೇಶ್ವರ ಕಾಳಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

No Comments

Leave A Comment