Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ವಿದ್ಯಾರ್ಥಿಗಳಿಗೆ ವಾರದಲ್ಲಿ ಐದು ದಿನ ಕ್ಷೀರ ಭಾಗ್ಯ: ಸಚಿವ ಸೊರಕೆ

ಕೋಟ: ವಿದ್ಯಾರ್ಥಿಗಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಕೈಗೊಂಡಿರುವ ಕ್ಷೀರ ಭಾಗ್ಯ ಯೋಜನೆಯನ್ನು ವಾರದಲ್ಲಿ ಐದು ದಿನಕ್ಕೆ ವಿಸ್ತರಿಸಲಾಗುವುದು ಹಾಗೂ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ಮುಂತಾದ ಸೌಲಭ್ಯ ನೀಡುವುದರ ಮೂಲಕ ಸರಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದರು.

ಅವರು ಮೇ 9ರಂದು ಕೋಟ ಹೋಬಳಿಯ ಗ್ರಾ.ಪಂ. ಗಳಿಗೆ ಭೇಟಿ ನೀಡಿದ ಸಂದರ್ಭ ಕೋಟ ಗ್ರಾ.ಪಂ.ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಪಡಿತರ ಚೀಟಿ ಸಮಸ್ಯೆ ಪರಿಹರಿಸಿದುದರಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನವಿದೆ. 73 ಸಾವಿರ ಮಂದಿ ಫಲಾನುಭವಿಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದು, ಇದರಲ್ಲಿ 63 ಸಾವಿರ ಮಂದಿಗೆ ಪಡಿತರ ಚೀಟಿ ವಿತರಿಸಲಾಗಿದೆ ಎಂದು ಅವರು ಹೇಳಿದರು.

ಗ್ರಾ.ಪಂ.ಗೆ ಭೇಟಿ

ಈ ಸಂದರ್ಭ ಕೋಟ ಹೋಬಳಿಯ ಪಾಂಡೇಶ್ವರ, ಐರೋಡಿ, ಕೋಡಿ, ಕೋಟತಟ್ಟು, ಕೋಟ, ಬಾಕೂìರು ಗ್ರಾ.ಪಂ.ಗೆ ಭೇಟಿ ನೀಡಿ ಸಂಧ್ಯಾ ಸುರಕ್ಷ, ಪಡಿತರ ಚೀಟಿ, ಬಾಗ್ಯಲಕ್ಷ್ಮೀ ಬಾಂಡ್‌, ಆಶ್ರಯ ಮನೆಗಳ ಸಾಲ ಮನ್ನಾ ಪ್ರಮಾಣ ಪತ್ರ ಮುಂತಾದ ಸೌಲಭ್ಯಗಳನ್ನು ವಿತರಿಸಿದರು ಹಾಗೂ ಸಾರ್ವಜನಿಕರ ಕುಂದು ಕೊರತೆ ಕುರಿತು ಸಂವಾದ ನಡೆಸಿದರು.

ಬ್ರಹ್ಮಾವರ ವಿಶೇಷ ತಹಶೀಲ್ದಾರ ತಿಪ್ಪೆಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ್‌ ಕುಂದರ್‌, ಕಂದಾಯ ಇಲಾಖೆಯ ಸುಧಾಕರ ಶೆಟ್ಟಿ, ಕೋಟ ತಿಮ್ಮ ಪೂಜಾರಿ, ಕೋಟ ಗ್ರಾ.ಪಂ. ಅಧ್ಯಕ್ಷ ಶಿವ ಪೂಜಾರಿ, ಶಿಶು ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಅನೇಕ ಇಲಾಖೆ ಅಧಿಕಾರಿಗಳು, ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

No Comments

Leave A Comment