Log In
BREAKING NEWS >
ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಶೀಘ್ರವೇ ಪನ್ನೀರ್ ಸೆಲ್ವಂ ರಾಜೀನಾಮೆ; ಮೇ 17ಕ್ಕೆ ಜಯಾ ಪ್ರಮಾಣವಚನ

ಚೆನ್ನೈ, ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನುಸೋಮವಾರ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಾಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೇ ತಮಿಳುನಾಡಿನ ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಬಹುತೇಕ ಇಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ಸಿಆರ್ ಕುಮಾರಸ್ವಾಮಿ, ಜಯಲಲಿತಾ ಸೇರಿದಂತೆ ನಾಲ್ವರ ವಿರುದ್ಧದ ಎಲ್ಲಾ ಆರೋಪಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ತೀರ್ಪು ನೀಡಿದ್ದರು. ಜಯಲಲಿತಾ ವಿಚಾರಣಾ ನ್ಯಾಯಾಲ ಯ ವಿಧಿಸಿದ್ದ 4ವರ್ಷ ಜೈಲುಶಿಕ್ಷೆ, 100 ಕೋಟಿ ರೂ.ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿ, ಅಧೀನ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದೆ.

ತೀರ್ಪು ಪ್ರಕಟವಾದ ಬೆನ್ನಲ್ಲೇ ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳೂ ಗರಿಗೆದರಿದೆ. ಚೆನ್ನೈನ ಫೋಯಸ್ ಗಾರ್ಡ್ ನ್ ಗೆ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸೇರಿದಂತೆ ಸಚಿವ ಸಂಪುಟದ ಸದಸ್ಯರೆಲ್ಲರೂ ಸೇರಿ ಮಾತುಕತೆ ನಡೆಸಿದ್ದಾರೆ.

ಅಲ್ಲದೇ ಪನ್ನೀರ್ ಸೆಲ್ವಂ ಶೀಘ್ರವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜಯಲಲಿತಾ ಮೇ 20ರೊಳಗೆ ಮತ್ತೆ ಮುಖ್ಯಮಂತ್ರಿ ಗದ್ದುಗೆ ಏರಲು ಸಿದ್ಧತೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

No Comments

Leave A Comment