Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಪಿಎಫ್ಐ ಸಂಘಟನೆ ವಿರುದ್ಧದ 40 ಕೇಸ್ ವಾಪಸ್; ಸಚಿವ ಸಂಪುಟ ಒಪ್ಪಿಗೆ

vidanasoda1ಬೆಂಗಳೂರು: ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ 2009ರಲ್ಲಿ ನಡೆದಿದ್ದ ಕೋಮುಗಲಭೆ ಸೇರಿದಂತೆ ಹಲವೆಡೆ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆ ವಿರುದ್ಧ ದಾಖಲಾಗಿದ್ದ 40 ಪ್ರಕರಣಗಳನ್ನು ವಾಪಸ್ ಪಡೆಯಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ, 331 ವೈದ್ಯರ ನೇಮಕ, 13 ಕೋಟಿ ವೆಚ್ಚದಲ್ಲಿ ಬೆಳಗಾವಿ ಪೊಲೀಸ್ ಆಯಕ್ತರ ಕಚೇರಿ ನಿರ್ಮಾಣಕ್ಕಾಗಿ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಕಾನೂನು ಸಚಿವ ಟಿಬಿ ಜಯಚಂದ್ರ ಮಾಹಿತಿ ನೀಡಿದರು. ಗದಗದಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಸ್ಥಾಪನೆ, 259 ಮನೆಗಳಿಗೆ ಹಕ್ಕು ಪತ್ರ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿತ್ತು. ಅಲ್ಲದೇ ಈ ಜಾಗವನ್ನು 20 ವರ್ಷಗಳವರೆಗೆ ಪರಭಾರೆ ಮಾಡದಂತೆ ನಿರ್ಬಂಧ ವಿಧಿಸಿದೆ.

ಪಿಎಫ್ಐ ವಿರುದ್ಧದ 40 ಕೇಸ್ ವಾಪಸ್:
ಮೈಸೂರಿನ ಕ್ಯಾತಮಾರನಹಳ್ಳಿ ಕೋಮುಗಲಭೆ ಪ್ರಕರಣದಲ್ಲಿ ಪಿಎಫ್ಐ ವಿರುದ್ಧ ಉದಯ್ ಪುರ್ ಮತ್ತು ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಮಾರು 214 ಮಂದಿ ವಿರುದ್ಧ ದೂರು ದಾಖಲಾಗಿತ್ತು. ಇದೀಗ 2 ಪ್ರಕರಣಗಳನ್ನು ಹೊರತುಪಡಿಸಿ, ಸಂಘಟನೆ ವಿರುದ್ಧ ದಾಖಲಾದ 40 ಪ್ರಕರಣ ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

No Comments

Leave A Comment