Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಈಗ ಮತ್ತೊಂದು ಕಿರಿಕ್: ದೆಹಲಿ ಎಸಿಬಿಗೆ ಬಿಹಾರ ಪೊಲೀಸ್ ಆಫೀಸರ್ಸ್ ನೇಮಕ

kejriwaljungನವದೆಹಲಿ: ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಒಂದು ಸುತ್ತಿನ ತಿಕ್ಕಾಟ ನಡೆದಿದ್ದ ಬೆನ್ನಿಗೇ ಇದೀಗ ದೆಹಲಿ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಐವರು ಬಿಹಾರ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಮತ್ತೊಂದು ಸುತ್ತಿನ ಜಂಗೀಕುಸ್ತಿಗೆ ಮುಂದಾಗಿದೆ.

ಈ ರೀತಿ ನೇಮಕ ಮಾಡುವ ಅಧಿಕಾರ ಇರುವುದು ಕೇವಲ ಲೆಫ್ಟಿನೆಂಟ್ ಗವರ್ನರ್ ಗೆ ಮಾತ್ರ ಎಂದು ಮಂಗಳವಾರ ಉಪರಾಜ್ಯಪಾಲರ ಕಚೇರಿ ಮೂಲಗಳು ತಿಳಿಸಿವೆ.

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ), ಪೊಲೀಸ್ ಠಾಣೆಗಳ ಆಡಳಿತದ ನಿಯಂತ್ರಣ ಮತ್ತು ಮೇಲ್ವಿಚಾರಣೆ ಲೆಫ್ಟಿನೆಂಟ್ ಗವರ್ನರ್ ಅವರ ಅಡಿಯಲ್ಲಿ ಬರಲಿದೆ ಎಂಬುದನ್ನು ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ರಾಜಭವನದ ಹೇಳಿಕೆ ತಿಳಿಸಿದೆ.

ದೆಹಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಹೊರ ರಾಜ್ಯವಾದ ಬಿಹಾರ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುವ ಬಗ್ಗೆ ಈವರೆಗೂ ದೆಹಲಿ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಮೂಲಗಳು ಹೇಳಿವೆ.

ದೆಹಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬಿಹಾರದ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುವ ಅಧಿಕಾರ ದೆಹಲಿ ಸರ್ಕಾರಕ್ಕೆ ಇಲ್ಲ. ಈ ಬಗ್ಗೆ ದೆಹಲಿ ಸರ್ಕಾರದ ಪ್ರಸ್ತಾವನೆಗಾಗಿ ಎದುರು ನೋಡುತ್ತಿರುವುದಾಗಿ ಪ್ರಕಟಣೆ ತಿಳಿಸಿದೆ.

No Comments

Leave A Comment