Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ವಳಕಾಡು ಶಾಲಾ ಪ್ರಾರಂಭೋತ್ಸವ

DSC_0729ಉಡುಪಿ: ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಇಲ್ಲಿ 2015-16 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಸೋಮವಾರದ೦ದು ಅದ್ದೂರಿಯಾಗಿ ನಡೆಯಿತು. ಸ್ಥಳೀಯ ನಗರಸಭಾ ಸದಸ್ಯೆ ಶ್ರೀಮತಿ ಗೀತಾ ರವಿ ಶೇಟ್ ದೀಪ ಬೆಳಗಿಸಿ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು ಹಾಗೂ ಸರಕಾರದ ವತಿಯಿಂದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಹಿತನುಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಇಂದು ರಮಾನಂದ ಭಟ್‌ರವರು ಶಾಲಾ ಹಳೆ ವಿದ್ಯಾರ್ಥಿ ಸಂಧ್ಯಾ ಡಿ. ರಾವ್ ಪ್ರಾಯೋಜಿಸಿರುವ ‘ಕನ್ನಡದ ಮೂಲಕ ಇಂಗ್ಲಿಷ್ ಕಲಿಕೆ ‘ಪುಸ್ತಕವನ್ನು ೮ನೇ ತರಗತಿಯ ೨೦೦ ವಿದ್ಯಾರ್ಥಿಗಳಿಗೆ ವಿತರಿಸಿದರು. ಶಾಲಾ ಹಳೆವಿದ್ಯಾರ್ಥಿಗಳಾದ ಸದಾನಂದ ಶೆಣೈ, ಅಮೃತ್ ಶೆಣೈ, ಅಜಿತ್ ರಾವ್, ಸತೀಶ್ ಶೇಟ್, ಆದರ್ಶ ರಾವ್ ನೀಡಿರುವ ಉಚಿತ ನೋಟ್ಸು ಪುಸ್ತಕಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅಮೃತ್ ಶೆಣೈ ಶಾಲಾ ಪ್ರಾರಂಭೋತ್ಸವದ ಮಹತ್ವವನ್ನು ವಿವರಿಸಿದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಾದ ಅನ್ನಪೂರ್ಣ ಐತಾಳ್, ಉಮೇಶ್ ನಾಯಕ್, ಸದಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಸ್ವಾಗತಗೈದರು. ಶಿಕ್ಷಕಿ ರೂಪರೇಖಾ ವಂದಿಸಿದರು. ವಿದ್ಯಾರ್ಥಿಗಳಾದ ರಾಖಿ ಮತ್ತು ಚೈತ್ರ ಕಾರ್ಯಕ್ರಮ ನಿರೂಪಿಸಿದರು.

No Comments

Leave A Comment