Log In
BREAKING NEWS >
ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು...

ಮ್ಯಾಗಿ ನೂಡಲ್ಸ್ ವಿವಾದ: ರಾಯಭಾರಿಗಳ ವಿರುದ್ಧ ಎಫ್ ಐಆರ್..!

Maggi-ನವದೆಹಲಿ: ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಗಿಯ ಪ್ರಚಾರ ರಾಯಭಾರಿಗಳಾದ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್ ಮತ್ತು ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ನಲ್ಲಿ ಮಕ್ಕಳ ಆರೋಗ್ಯ ಹಾಳುಮಾಡಬಲ್ಲ ವಿಷಕಾರಿ ಅಂಶಗಳು ಪತ್ತೆಯಾಗಿವೆ ಎಂದು ಸುಧೀರ್ ಕುಮಾರ್ ಓಜಾ ಎಂಬ ವಕೀಲರೊಬ್ಬರು ಬಿಹಾರದ ಮುಜಾಫರಪುರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಸಂಸ್ಥೆಯ ಈ ಮೂವರು ರಾಯಭಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಹಾಜಿ ಪೊಲೀಸ್ ಠಾಣೆಯ ಪೊಲೀಸರಿಗೆ ಸೂಚನೆ ನೀಡಿದೆ. ಕೋರ್ಟ್ ಸೂಚನೆಯ ಹಿನ್ನಲೆಯಲ್ಲಿ ಹಾಜಿ ಪೊಲೀಸರು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ನೆಸ್ಲೆ ಸಂಸ್ಥೆಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಪತ್ತೆಯಾದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಗಳು ನಡೆಯುತ್ತಿದ್ದು, ಬಿಹಾರ, ಉತ್ತರ ಪ್ರದೇಶದ ಕೆಲ ವಕೀಲರು ವಿವಾದಿತ ಮ್ಯಾಗಿ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದು, ಅಲ್ಲದೆ ಸಂಸ್ಥೆಯ ಪ್ರಚಾರ ರಾಯಭಾರಿಗಳಾಗಿರುವ ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಪ್ರಿಯಾಂಕ ಛೋಪ್ರಾ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಈಗಾಗಲೇ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಈಮೂವರು ನಟರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಮುಜಾಫರಪುರ ನಲ್ಲಿಯೂ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಇನ್ನು ನಿನ್ನೆಯಷ್ಟೇ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಕುರಿತು ಸ್ಪಷ್ಟನೆ ನೀಡಿದ್ದ ನೆಸ್ಲೆ ಸಂಸ್ಥೆ, ತಾವು ಮ್ಯಾಗಿ ನೂಡಲ್ಸ್ ಅನ್ನು ಪರೀಕ್ಷೆಗೆ ಒಳಪಡಿಸಿದ್ದು ಯಾವುದೇ ವಿಷಕಾರಿ ಅಂಶಗಳು ಪತ್ತೆಯಾಗಿಲ್ಲ. ಕಾನೂನಿನ ಅನ್ವಯ ಯಾವ ಕ್ರಮಗಳನ್ನು ಕೈಗೊಳ್ಳಬೇಕೋ ಎಲ್ಲವನ್ನು ನಾವು ಕೈಗೊಂಡಿದ್ದೇವೆ ಎಂದು ನೆಸ್ಲೆ ಸಂಸ್ಥೆಯ ವಕ್ತಾರರು ತಿಳಿಸಿದ್ದರು.

No Comments

Leave A Comment