Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ರಾಜ್ಯದಲ್ಲಿ ಮ್ಯಾಗಿ ಸೇಲ್ ತಾತ್ಕಾಲಿಕ ನಿಷೇಧ,ಉತ್ಪಾದನಾ ಘಟಕವೂ ಸ್ಥಗಿತ-ಸಚಿವ ಯುಟಿ ಖಾದರ್

Khadarಬೆಂಗಳೂರು: ಮ್ಯಾಗಿ ಉತ್ಪನ್ನಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮ್ಯಾಗಿ ಉತ್ಪನ್ನಗಳ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿರುವುದಾಗಿ ಆರೋಗ್ಯ ಸಚಿವ ಯುಟಿ ಖಾದರ್ ಶನಿವಾರ ತಿಳಿಸಿದ್ದಾರೆ.

ಮ್ಯಾಗಿ ನಿಷೇಧದ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮ್ಯಾಗಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ಹಾಗಾಗಿ ರಾಜ್ಯದಲ್ಲಿನ ಮ್ಯಾಗಿ ಉತ್ಪಾದನಾ ಘಟಕಗಳಿಗೂ ನಿಷೇಧ ಹೇರಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ರೋಬೋಸ್ಟ್ ಲ್ಯಾಬ್ ವರದಿ ಪ್ರಕಾರ ಮ್ಯಾಗಿಯಲ್ಲಿ ಸೀಸ ಮತ್ತು ಮೋನೋಸೋಡಿಯಂ ಗ್ಲುಟಮೇಟ್ ಪ್ರಮಾಣ ಅಗತ್ಯಕ್ಕಿಂತ ಹೆಚ್ಚಿಲ್ಲ ಎಂದು ಹೇಳಿದೆ. ಇದೀಗ ಕೇಂದ್ರ ಆರೋಗ್ಯ ಪ್ರಯೋಗಾಲಯ (ಪಶ್ಚಿಮಬಂಗಾಳದಲ್ಲಿರುವ ಸಿಎಫ್ ಟಿಆರ್ ಐ ಲ್ಯಾಬ್) ಮತ್ತು ಕೋಲ್ಕತಾ ಪ್ರಯೋಗಾಲಯದಿಂದ ವರದಿ ಬಂದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರದ ಆದೇಶದಂತೆ ಹಾಗೂ ಮ್ಯಾಗಿಯಲ್ಲಿ ವಿಷಕಾರಿ ಅಂಶ ಪತ್ತೆಯಾದ ನಿಟ್ಟಿನಲ್ಲಿ ರಾಜ್ಯದಲ್ಲಿ ತಾತ್ಕಾಲಿಕ ನಿಷೇಧ ಹೇರಿದ್ದೇವೆ ಎಂದರು.

No Comments

Leave A Comment