Log In
BREAKING NEWS >
ಸಮಸ್ತ ಓದುಗರಿಗೆ, ಜಾಹೀರಾತುದಾರರಿಗೆ, ಅಭಿಮಾನಿಗಳಿಗೆ ಕರಾವಳಿ ಕಿರಣ ಡಾಟ್ ಕಾ೦ ಬಳಗದವತಿಯಿ೦ದ ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಶುಭಾಶಯಗಳು.... ಅಕ್ಟೋಬರ್ 29ರ೦ದು ಬೆಳಿಗ್ಗೆ 4.45ಕ್ಕೆಕಾರ್ತಿಕ ಮಾಸದ ಪ್ರಯುಕ್ತ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ವಿಜಯಮಾಲೆ

6BNP18ಬೆಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ ನಂತರ ಬರಲಿರುವ ವಿಧಾನಸಭೆ ಚುನಾವಣೆಯಲ್ಲೂ ಮುಂದುವರೆ ಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ಪ್ರಯುಕ್ತ ವಿಧಾನಸೌಧದ ಆವರಣದ ಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿಯವರಿಗೆ 5 ಹಾಗೂ ಜೆಡಿಎಸ್‌ನವರಿಗೆ 3 ಜಿಲ್ಲೆಗಳಲ್ಲಿ ಮುನ್ನಡೆ ಸಿಕ್ಕಿದ್ದು, ಉಳಿದಂತೆ 21 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮುನ್ನಡೆ ಸಿಕ್ಕಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದೇ ಫ‌ಲಿತಾಂಶ ಮುಂದಿನ ಬಿಬಿಎಂಪಿ, ಜಿ.ಪಂ, ತಾ.ಪಂ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಅರಸು ಜನ್ಮ ಶತಮಾನೋತ್ಸವ: ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ದುರ್ಬಲ ವರ್ಗಗಳಿಗೆ ರಾಜಕೀಯ, ಸಾಮಾಜಿಕ ಶಕ್ತಿ ತಂದುಕೊಟ್ಟ ಡಿ. ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಇಡೀ ವರ್ಷ ವಿವಿಧ ಕಾರ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯಲು ನಮಗೆ ದೇವರಾಜ ಅರಸು ಅವರೇ ಸ್ಫೂರ್ತಿ ಎಂದು ಸಿದ್ದರಾಮಯ್ಯ ಇದೇ ವೇಳೆ ಅವರು ತಿಳಿಸಿದರು.

ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು 10 ದಿನ ಬೆಳಗಾವಿ ಮತ್ತು 10 ದಿನ ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಬಾರಿಯೂ ನಾನೇ ಸಿಎಂ ಅಂತ ಎಲ್ಲಿಯೂ ಹೇಳಿಲ್ಲ. ಬರುವ ವಿಧಾನಸಭೆ ಚುನಾವಣೆಯಲ್ಲಿ ಜಯ ಗಳಿಸುವ ಮೂಲಕ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಆದರೆ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ರಾಜ್ಯದ ಗ್ರಾಪಂಗಳಿಗೆ ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಫಲಿತಾಂಶ ಕಾಂಗ್ರೆಸ್‌ ಪರವಾಗಿದ್ದು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೀಮ ಬಲ ಬಂದಂತಾಗಿದೆ. ಮತದಾನ ಕಡ್ಡಾಯಗೊಳಿಸಿದ್ದರಿಂದ ಮತದಾನ ಮಾಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.
ಎಚ್‌.ಕೆ.ಪಾಟೀಲ, ಸಚಿವ.

ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಮೈಸೂರು, ಚಾಮರಾಜನಗರ ಭಾಗ ಹೊರತುಪಡಿಸಿದರೆ ರಾಜ್ಯದ ಉಳಿದೆಡೆ ಪಕ್ಷದ ಸಾಧನೆ ತೃಪ್ತಿ ತಂದಿದೆ. ಬಹುತೇಕ ಗ್ರಾಪಂಗಳಲ್ಲಿ ಪಕ್ಷದ ಬೆಂಬಲಿತರೇ ಅಧಿಕಾರ ಹಿಡಿಯಲಿದ್ದಾರೆ.
ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ.

 

No Comments

Leave A Comment